ಪ್ರಮುಖ ಸುದ್ದಿ
ವಿದ್ಯುತ್ ಸ್ಪರ್ಶ : ಐವರು ಹಾಸ್ಟೆಲ್ ವಿದ್ಯಾರ್ಥಿಗಳು ಸಾವು
ಕೊಪ್ಪಳ: ಧ್ವಜಸ್ಥಂಭ ತೆರವುಗೊಳಿಸುವ ವೇಳೆ ಕಬ್ಬಿಣದ ಕಂಬ ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಪರಿಣಾಮ ವಿದ್ಯುತ್ ಪ್ರವಹಿಸಿ ಐವರು ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ಕೊಪ್ಪಳ ನಗರದ ದೇವರಾಜ ಅರಸು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವಸತಿ ನಿಲಯದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು 10ನೇ ತರಗತಿ ವಿದ್ಯಾರ್ಥಿಗಳಾದ ಮಲ್ಲಿಕಾರ್ಜುನ್ , ಬಸವರಾಜ್ , 9 ನೇ ತರಗತಿ ವಿದ್ಯಾರ್ಥಿ ದೇವರಾಜ್ , ಕುಮಾರ್, 8 ನೇ ತರಗತಿ ವಿದ್ಯಾರ್ಥಿ ಗಣೇಶ್ ಎಂದು ಗುರುತಿಸಲಾಗಿದೆ. ಕೊಪ್ಪಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆಯಿಂದಷ್ಟೇ ಘಟನೆಗೆ ನಿಖರವಾದ ಕಾರಣ ಏನು ಎಂಬುದು ತಿಳಿದು ಬರಬೇಕಿದೆ.