ಪ್ರಮುಖ ಸುದ್ದಿ
ಲಾರಿ-ಕಾರು ಮುಖಾಮುಖಿ ಡಿಕ್ಕಿ : ಅಪ್ಪ ಮತ್ತು ಮಗ ಸ್ಥಳದಲ್ಲೇ ಸಾವು!
ಯಾದಗಿರಿ : ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದ ಸಮೀಪ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ರಾಯಚೂರು ಜಿಲ್ಲೆ ದೇವದುರ್ಗ ಮೂಲದ ಶ್ರೀನಿವಾಸ್ (45) , ಪುತ್ರ ವಿನಾಯಕ(20) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಶಹಾಪುರ ಠಾಣೆಯ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಹಾಪುರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರ ತನಿಖೆಯಿಂದಷ್ಟೇ ಅಪಘಾತಕ್ಕೆ ನಿಖರವಾದ ಕಾರಣವೇನೆಂಬುದು ತಿಳಿದು ಬರಬೇಕಿದೆ.