ಗ್ರಾಮಾಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ- ದರ್ಶನಾಪುರ
ಗ್ರಾಮಾಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ- ದರ್ಶನಾಪುರ
yadgiri, ಶಹಾಪುರಃ ಹಳ್ಳಿಗಳು ಅಭಿವೃದ್ಧಿ ಹೊಂದಿದ್ದಲ್ಲಿ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದರು.
ತಾಲೂಕಿನ ತಿಪ್ಪನಹಳ್ಳಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಂಗನವಾಡಿ ಕಟ್ಟಡ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಸರ್ಕಾರ ಹಲವಾರು ಯೋಜನೆಗಳು ಅನುಷ್ಠಾನಗೊಳಿಸಿದ್ದು, ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಯಾವುದೇ ಗ್ರಮಕ್ಕೆ ಮೊದಲು ಶೌಚಾಲಯ, ಶುದ್ಧ ಕುಡಿಯುವ ನೀರು, ಚರಂಡಿ ಮತ್ತು ರಸ್ತೆಯಂತ ಮೂಲ ಸೌಲಭ್ಯ ಕಲ್ಪಿಸಿದಲ್ಲಿ ಗ್ರಾಮ ಅಭಿವೃದ್ಧಿಗೆ ಪೂರಕವಾಗಲಿದೆ. ತದನಂತರ ಪ್ರಾಥಮಿಕವಾಗಿ ಶೈಕ್ಷಣಿಕ ಸೌಲಭ್ಯಕ್ಕಾಗಿ ಅಂಗನವಾಡಿ, ಶಾಲಾ ಕಟ್ಟಡಗಳು, ಗ್ರಂಥಾಲಯದಂತ ಸೌಕರ್ಯ ಅಗತ್ಯವಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡ ಶರಣಗೌಡ ಗುಂಡಗುರ್ತಿ, ಗ್ರಾಪಂ ಅಧ್ಯಕ್ಷ ಸಿದ್ದಪ್ಪ ಚಟ್ನಳ್ಳಿ, ನಿಂಗಣ್ಣ ನಾಟೇಕಾರ, ಮಶಾಕಸಾಬ ಬಾಬುರಾವ್ ಪೂಜಾರಿ, ಲಿಂಬೆಣ್ಣ ಗೇನುಸಿಂಗ್, ಸಂಗಣ್ಣ, ಅಂಜನಯ್ಯ, ಗೋಣೆಪ್ಪ, ಮಲ್ಲಣ್ಣಗೌಡ ಪಾಟೀಲ್, ಬಸವರಾಜ ನಾಟೇಕಾರ, ಸಣ್ಣ ನಿಂಗಣ್ಣ ನಾಯ್ಕೋಡಿ ಇತರರಿದ್ದರು.