ಪ್ರಮುಖ ಸುದ್ದಿ
ಸರ್ಕಾರಿ ವೈದ್ಯರಿಗೆ ಖಡಕ್ ವಾರ್ನಿಂಗ್ ನೀಡಿದ ಸಚಿವ ಶ್ರೀರಾಮುಲು
ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆ ತೆರೆಯುವಂತಿಲ್ಲ- ಶ್ರೀರಾಮುಲು
ಕೋಲಾರ : ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ವಾರ್ನಿಂಗ್ ನೀಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸರ್ಕಾರಿ ವೈದ್ಯರು ಸರ್ಕಾರಿ ಕೆಲಸದಿಂದ ತೊಲಗಲಿ ಎಂದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ವೈದ್ಯರು ಸರ್ಕಾರಿ ಹಾಗೂ ಖಾಸಗಿ ಎರಡೂ ಕಡೆಗಳಲ್ಲಿ ಕೆಲಸ ಮಾಡಲು ಅವಕಾಶವಿಲ್ಲ.
ಎರಡೂ ಕಡೆಗಳಲ್ಲಿ ಕೆಲಸ ಮಾಡುವ ವೈದ್ಯರ ವಿರುದ್ಧ ಸರ್ಕಾರದಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಲ್ಲದೆ ವೈದ್ಯಕೀಯ ಕೋರ್ಸ್ ಮುಗಿಸಿದ ಬಳಿಕ ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ನಿಗದಿತ ಅವಧಿವರೆಗೆ ಸೇವೆ ಸಲ್ಲಿಸಲೇಬೇಕು. ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರದೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವದಾಗಿ ತಿಳಿಸಿದರು.