ಗ್ಯಾರಂಟಿ ಯೋಜನೆ ಬಗ್ಗೆ ಸಿಎಂ ಸ್ಪಷ್ಟನೆ ಏನು?
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆ ಬಗ್ಗೆ ಸಿಎಂ ಸ್ಪಷ್ಟನೆ ಏನಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಗ್ಯಾರಂಟಿ ಯೋಜನೆ ಬಗ್ಗೆ ಸಿಎಂ ಸ್ಪಷ್ಟನೆ ಏನು?;
ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಪಂಚ ಯೋಜನೆಗಳನ್ನು ಗ್ಯಾರಂಟಿ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಅವು ಮುಂದುವರೆಯುತ್ತವೆ. ಪುನರ್ ಪರಿಶೀಲನೆಯನ್ನೂ ಮಾಡುವುದಿಲ್ಲ. ಚುನಾವಣೆಗಾಗಿ ಅವುಗಳನ್ನು ಜಾರಿಗೊಳಿಸಿಲ್ಲ. ಬಡವರಿಗೆ ಆರ್ಥಿಕ ಸಾಮಾಜಿಕವಾಗಿ ಹಾಗೂ ಶಕ್ತಿ ತುಂಬಲು ಮಾಡಿದ್ದೇವೆ. ಹೀಗಾಗಿ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳು ಚುನಾವಣೆಯ ನಂತರ ನಿಲ್ಲುತ್ತದೆ ಎಂಬ ವದಂತಿಗೆ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದು, ಇದರಿಂದಾಗಿ ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದಂತಾಗಿದೆ.