ಪ್ರಮುಖ ಸುದ್ದಿ
ಸಮರಕ್ಕೆ ಸಿದ್ಧ ಎಂದರಾ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ!
ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ‘ಆಪರೇಷನ್ ಕಮಲದ ಅನೈತಿಕ ಕೂಸು’. ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರ್ಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ. ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಸಿದ್ಧರಾಮಯ್ಯ ಸಮರಕ್ಕೆ ಸಿದ್ಧ ಎಂಬ ಸಂದೇಶ ಸಾರಿದ್ದಾರೆ.