ಪ್ರಮುಖ ಸುದ್ದಿ
ಸಿಎಂ ಬಿ.ಎಸ್.ಯಡಿಯೂರಪ್ಪ ಮೇಲೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಅನುಕಂಪ!
ಬೆಂಗಳೂರು : ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನುಭವಿಸುತ್ತಿರುವ ಅವಮಾನ, ಅನ್ಯಾಯ, ಅಸಂತೋಷವನ್ನು ನೋಡುತ್ತಿದ್ದರೆ ಅವರ ರಾಜಕೀಯ ಎದುರಾಳಿಯಾದ ನನ್ನಂತಹವನಲ್ಲಿಯೂ ಅವರ ಬಗ್ಗೆ ಅನುಕಂಪ ಮೂಡುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ. ಸಿದ್ಧರಾಮಯ್ಯ ಅವರ ಈ ಟ್ವೀಟ್ ನ್ನು ರಾಜಕೀಯ ವಲಯದಲ್ಲಿ ವಿವಿಧ ರೀತಿಯಲ್ಲಿ ಅರ್ಥೈಸಲಾಗುತ್ತಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.