ಪ್ರಮುಖ ಸುದ್ದಿ
ಭೀಕರ ಅಪಘಾತ; ನಾಲ್ವರು ವಿದೇಶಿಗರು ಸೇರಿ ಐವರ ಸಾವು!
ಪ್ರವಾಸ ಹೊರಟವರು ಪರದೇಶದಲ್ಲೇ ಕೊನೆಯಾದರು!
ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಪುಂಗನೂರು ಬಳಿ ಭೀಕರ ಅಪಘಾತ ಸಂಭವಿಸಿದೆ. ವಿದೇಶಿಗರು ಸಂಚರಿಸುತ್ತಿದ್ದ ಟೆಂಪೋ ಟ್ರ್ಯಾವಲರ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ವಿದೇಶಿಗರು ಸೇರಿ ಐದು ಜನ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನುಳಿದ ಆರು ಜನ ವಿದೇಶಿಯರು ಗಾಯಗೊಂಡಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೃತರು ಸ್ಪೇನ್ ದೇಶದವರೆಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳಿಂದ 11ಜನ ವಿದೇಶಿ ಪ್ರಜೆಗಳು ಆಂದ್ರಪ್ರದೇಶದಲ್ಲಿ ಪ್ರವಾಸ ಮಾಡುತ್ತಿದ್ದರು. ಇಂದು ನಡೆದ ದುರಂತದಿಂದ ವಿದೇಶಿಗರು ಕಂಗಾಲಾಗಿದ್ದಾರೆ. ಸ್ಥಳಕ್ಕೆ ಚಿತ್ತೂರು ಡಿಸಿ ಮತ್ತು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.