ಪ್ರಮುಖ ಸುದ್ದಿ
ಹರಿಯಾಣ, ಮಹಾರಾಷ್ಟ್ರದಲ್ಲಿ ಮೋದಿಯನ್ನು ಜನ ತಿರಸ್ಕರಿಸಿದ್ದಾರೆ-ಸಿದ್ದು
ಸಮೀಕ್ಷೆಗಳು ಹುಸಿ ಮಾಡಿದ ಫಲಿತಾಂಶ-ಸಿದ್ರಾಮಯ್ಯ
ಬೆಂಗಳೂರಃ ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಪ್ರಧಾನಿ ನರೇಂದ್ರ ಮೋದಿಯವರನ್ನು ತಿರಸ್ಕರಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ರಾಮಯ್ಯ ತಿಳಿಸಿದ್ದಾರೆ.
ಈ ಎರಡು ರಾಜ್ಯಗಳ ಚುನಾವಣೆಯಲ್ಲಿ ಮೋದಿಯವರನ್ನು ಜನ ತಿರಸ್ಕರಿಸಿದ್ದಾರೆ. ಎಲ್ಲಾ ಸಮೀಕ್ಷೆಗಳಲ್ಲಿ ಬಿಜೆಪಿ ಭರ್ಜರಿ ಜಯ ಎಂದು ಸುದ್ದಿ ಮಾಡಲಾಗಿತ್ತು. ಆದರೆ ಈಗ ಎಲ್ಲಾ ಸಮೀಕ್ಷೆ ಹುಸಿಯಾಗಿವೆ. ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸಮಬಲದ ಹೋರಾಟ ನಡೆದಿದೆ. ಸ್ಥಾನಗಳು ಸಹ ಸಮಬಲವಾಗಿವೆ.
ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ಬರುವ ನಿರೀಕ್ಷೆ ಇತ್ತು. ಆದರೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಬಗ್ಗೆ ಇರಲಿಲ್ಲ. ಅದರಂತೆ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರದತ್ತ ಸಾಗುತ್ತಿದೆ.