ಪ್ರಮುಖ ಸುದ್ದಿ

2 ಬಾರಿಯೂ ಅಧಿಕಾರಕ್ಕಾಗಿ ವಾಮ ಮಾರ್ಗ ಅನುಸರಿಸಿದ ಬಿಜೆಪಿ-ಸಿದ್ರಾಮಯ್ಯ

ಶಿವಮೊಗ್ಗಃ  ಶಾಸಕರ ಅನರ್ಹತೆ ಪ್ರಕರಣದ ತೀರ್ಪು ನಮ್ಮ ಪರವಾಗಿ ಬರಲಿದ್ದು, ಆಮಿಷಗಳಿಗೆ ಒಳಗಾಗಿ ಆಯ್ಕೆಯಾದ ಪಕ್ಷಕ್ಕೆ ದ್ರೋಹ ಬಗೆದು ಪಕ್ಷಾಂತರ ಮಾಡುವವರಿಗೆ ಇದೊಂದು ತಕ್ಕ ಪಾಠವಾಗಲಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಗೌರವಿಸದವರಿಗೆ ರಾಜಕೀಯದಲ್ಲಿ ಮುಂದುವರೆಯುವ ಯಾವ ನೈತಿಕತೆಯೂ ಇರುವುದಿಲ್ಲ ಎಂಬುದು ಎಂದು ವಿಪಕ್ಷ ನಾಯಕ ಸಿದ್ರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಚೈತನ್ಯ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಹಿಂದೆ ಶಾಸಕರು ಮತ್ತು ಸಂಸದರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೋಗುವುದು ಸಾಮಾನ್ಯವಾಗಿತ್ತು. ಈ ಪಕ್ಷಾಂತರವೆಂಬ ರಾಜಕೀಯ ಪಿಡುಗನ್ನು ಹೋಗಲಾಡಿಸಬೇಕೆಂಬ ಉದ್ದೇಶದಿಂದ ಅಂದಿನ ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ ತಿದ್ದುಪಡಿ ತಂದು, ಪಕ್ಷಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರು.

2008 ಮತ್ತು ಈಗ ಎರಡು ಬಾರಿ ಕೂಡ ಬಿಜೆಪಿಯವರು ಜನಾದೇಶದಿಂದ ಮುಖ್ಯಮಂತ್ರಿಯಾದವರಲ್ಲ. ಆಪರೇಷನ್ ಕಮಲದ ಮೂಲಕ ವಾಮಮಾರ್ಗದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಈ ಆಪರೇಷನ್ ಕಮಲ ಎಂಬ ಅನೈತಿಕ ರಾಜಕಾರಣಕ್ಕೆ ಕೇಂದ್ರ ಸರ್ಕಾರದ ಬೆಂಬಲವೂ ಇದೆ ಎಂದು ಮುಖ್ಯಮಂತ್ರಿಗಳೇ ಕೋರ್ ಕಮಿಟಿ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ ಎಂದರು.

Related Articles

Leave a Reply

Your email address will not be published. Required fields are marked *

Back to top button