ಪ್ರಮುಖ ಸುದ್ದಿ
ದಲಿತ ಯುವಕನ ಕೊಲೆ ಪ್ರಕರಣ- ಆರೋಪಿಗಳಿಬ್ಬರ ಬಂಧನ
ದಲಿತ ಯುವಕನ ಕೊಲೆ ಪ್ರಕರಣ- ಆರೋಪಿಗಳಿಬ್ಬರ ಬಂಧನ
ಸಿಂದಗಿಃ ತಾಲೂಕಿನ ಬೂದಿಹಾಳ ಪಿ.ಎಚ್. ಗ್ರಾಮದಲ್ಲಿ ದಲಿತ ಯುವಕನೋರ್ವನನ್ನು ಕ್ಷುಲ್ಲಕ ಕಾರಣಕ್ಕೆ ಬರ್ಬರ ಹತ್ಯೆ ಮಾಡಿದ ಆರೋಪಿ ಇಬ್ನರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಕುರಿತು ಎಲ್ಲಡೆ ವಿರೋಧ ವ್ಯಕ್ತವಾಗಿ ಖಂಡಿಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಲಾಗಿತ್ತು. ಆರೋಪಿಗಳ ವಿಚಾರಣೆ ತೀವ್ರವಾಗಿ ನಡೆಸಿದ ಪೊಲೀಸರು ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ.