ಪ್ರಮುಖ ಸುದ್ದಿ
ಶಹಾಪುರಃ ಭಗವದ್ಗೀತಾ ಅಭಿಯಾನ ನಿಮಿತ್ತ ಸಭೆ, ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನದ ಶ್ರೀ ಆಗಮನ
ನಾಳೆ ರಾಯರಮಠದಲ್ಲಿ ವಿಶೇಷ ಸಭೆಃ ಆಹ್ವಾನ
ಶಹಾಪುರಃ ನಾಡಿನೆಲ್ಲಡೆ ಶ್ರೀಭಗವದ್ಗೀತೆ ಪಠಣ ನಡೆದು ಲೋಕ ಕಲ್ಯಾಣವಾಗಬೇಕು ಸ್ವಾಸ್ಥ್ಯ ಸಮಾಜ ನಿರ್ಮಾಣವಾಗಬೇಕು ಎಂಬ ಹಿನ್ನೆಲೆಯಲ್ಲಿ ನ.12 ರವಿವಾರ ಶಹಾಪುರ ನಗರಕ್ಕೆ ಶ್ರೀಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಆಗಮಿಸಲಿದ್ದಾರೆ.
ಮದ್ಯಾಹ್ನ 3 ಗಂಟೆಗೆ ಹಳೆಪೇಟೆಯ ಶ್ರೀರಾಘವೇಂದ್ರಸ್ವಾಮಿ ಮಠದ ಆವರಣದಲ್ಲಿ ವಿಶೇಷ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದಲ್ಲಿ ಸ್ಥಳೀಯ ಗುಂಬಳಾಪುರ ಮಠದ ಸಿದ್ದೇಶ್ವರ ಶಿವಾಚಾರ್ಯರು, ಹಿರೇಮಠದ ಸೂಗೂರೇಶ್ವರ ಶಿವಾಚಾರ್ಯರು, ಫಕೀರೇಶ್ವರ ಮಠದ ಗುರುಪಾದ ಸ್ವಾಮಿಗಳು,
ಚರಬಸವೇಶ್ವರ ಸಂಸ್ಥಾನದ ಬಸವಯ್ಯ ಶರಣರು, ಏಕದಂಡಗಿ ಮಠದ ಕಾಳಹಸ್ತೇಂದ್ರ ಸ್ವಾಮಿಗಳು ಭಾಗವಹಿಸಲಿದ್ದಾರೆ. ಶಾಸಕ ಗುರು ಪಾಟೀಲ ಶಿರವಾಳ ಅಧ್ಯಕ್ಷತೆವಹಿಸಲಿದ್ದಾರೆ ಎಂದು ಭಗವದ್ಗೀತಾ ಅಭಿಯಾನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಕಾರಣ ಯುವಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಮಿತಿ ಕೋರಿದೆ.