ಪ್ರಮುಖ ಸುದ್ದಿ
ದೆಹಲಿಯಲ್ಲಿ ಕೈ ಸಭೆ: ಇಂದೇ ವಿಪಕ್ಷ ನಾಯಕನ ಆಯ್ಕೆ?

ಕಾಂಗ್ರೆಸ್ ಇಂದು ದೆಹಲಿಯಲ್ಲಿ ಸಭೆ ನಡೆಸಲಿದೆ. ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ವಾಧ್ರ ಸೇರಿದಂತೆ ಕಾಂಗ್ರೆಸ್ ಗಣ್ಯರು ಭಾಗವಹಿಸಲಿದ್ದಾರೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸಂಜೆ ನಡೆಯಲಿರುವ ಈ ಸಭೆಗೆ ರಾಜ್ಯದಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ.
ಈ ಸಭೆಯಲ್ಲಿ ವಿರೋಧ ಪಕ್ಷವಾಗಿ ಮಾಡಬೇಕಾದ ಕಾರ್ಯಗಳು ಹಾಗೂ ವಿಪಕ್ಷ ನಾಯಕನ ಆಯ್ಕೆ ನಡೆಯುವ ಸಾಧ್ಯತೆಗಳಿವೆ.