ಪ್ರಮುಖ ಸುದ್ದಿ
ಗೃಹ ಸಚಿವ ಎಂ.ಬಿ.ಪಾಟೀಲ್ ಗೆ ಚಾಟಿ ಬೀಸಿದ ಸ್ಪೀಕರ್ ರಮೇಶ್ ಕುಮಾರ್!
ಬೆಂಗಳೂರು : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂಬೈನಿಂದ ಬೆಂಗಳೂರಿಗೆ ಬಂದ ಅತೃಪ್ತರಿಗೆ ಸ್ಪೀಕರ್ ಕಚೇರಿಗೆ ಬರಲು ಝೀರೋ ಟ್ರಾಫಿಕ್ ನೀಡಿದ್ದರ ಬಗ್ಗೆ ಸದನದಲ್ಲಿ ಚರ್ಚೆ ನಡೆದಿದೆ. ಈ ಸಂದರ್ಭದಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ ಝೀರೋ ಟ್ರಾಫಿಕ್ ವ್ಯವಸ್ಥೆ ನೀಡಿಲ್ಲ ಎಂದು ಸಮಜಾಯಿಷಿ ನೀಡಿದ್ದು ಸ್ಪೀಕರ್ ರಮೇಶ್ ಕುಮಾರ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಇಡೀ ದೇಶವೇ ನಿಮ್ಮ ಇಲಾಖೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದನ್ನು ನೋಡಿದೆ. ನಿಮ್ಮ ಆತ್ಮಸಾಕ್ಷಿ ನಿಮ್ಮ ಮಾತಿಗೆ ಒಪ್ಪುತ್ತದೆಯೇ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು. ಗೃಹ ಸಚಿವರಾಗಿದ್ದ ನಿಮಗೆ ಈ ಬಗ್ಗೆ ಮಾಹಿತಿ ಇಲ್ಲವೆಂದರೆ ಹೇಗೆ ಎಂದು ಚಾಟಿ ಬೀಸಿದರು.