ಪ್ರಮುಖ ಸುದ್ದಿ
ಬಿಜೆಪಿ ಸಂಸದ ಶ್ರೀರಾಮುಲು ನಿವಾಸದಲ್ಲಿ ಅಗ್ನಿ ಅವಘಡ!
ದೆಹಲಿ: ಬಳ್ಳಾರಿ ಲೋಕಸಭೆ ಕ್ಷೇತ್ರದ ಬಿಜೆಪಿ ಸಂಸದ ಶ್ರೀರಾಮುಲು ನಿವಾಸದಲ್ಲಿ ಅಗ್ನಿ ಅವಘಡ ನಡೆದಿದೆ. ದೆಹಲಿಯ ಫಿರೋಜ್ ಶಾ ರಸ್ತೆಯಲ್ಲಿರುವ ನಿವಾಸದಲ್ಲಿ ಆಕಸ್ಮಿಕ ಅಗ್ನಿ ಅವಘಢ ನಡೆದಿದೆ. ಈ ಸಂದರ್ಭದಲ್ಲಿ ಸಂಸದ ಶ್ರೀರಾಮುಲು ಮನೆಯಲ್ಲೇ ಇದ್ದರು. ಅಗ್ನಿ ಅವಘಢದ ಮಾಹಿತಿ ತಿಳಿದಾಕ್ಷಣ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದೆ. ಆ ಮೂಲಕ ಹೆಚ್ಚಿನ ಅನಾಹುತವನ್ನು ತಪ್ಪಿಸಿದೆ ಎಂದು ತಿಳಿದು ಬಂದಿದೆ.
ಸಂಸದರ ನಿವಾಸದ ಕಾರು ಶೆಡ್ ಸೇರಿದಂತೆ ಇತರೆ ಬೆಲೆ ಬಾಳುವ ಆಸ್ತಿಪಾಸ್ತಿ ಬೆಂಕಿಗಾಹುತಿ ಆಗಿದೆ. ಆದರೆ ಮನೆಯಲ್ಲಿದ್ದವರು ಎಲ್ಲರೂ ಸೇಫ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಆದರೆ, ಅಗ್ನಿ ಅವಘಡಕ್ಕೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.