ಪ್ರಮುಖ ಸುದ್ದಿ
ಸೆ.28 ರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಮುಂದೂಡಿಕೆ
ಸೆ.28 ರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಮುಂದೂಡಿಕೆ
ಬೆಂಗಳೂರಃ ಸೆಪ್ಟೆಂಬರ್ 28 ರಂದು ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿಯ ಪೂರಕ ಪರೀಕ್ಷೆಯನ್ನು ಸೆ.29 ಕ್ಕೆ ಮುಂದೂಡಿ ಎಸ್ಸೆಸ್ಸೆಲ್ಸಿ ಬೋರ್ಡ್ ಆದೇಶ ಹೊರಡಿಸಿದೆ.
ಕಾರಣ ಸೆ.28 ರಂದು ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆಕೊಟ್ಟ ಹಿನ್ನೆಲೆ ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದೆ ಎಂಬ ಉದ್ದೇಶದಿಂದ ಅಂದು ನಡೆಯುವ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಪರೀಕ್ಷೆಗಳನ್ನು ಮುಂದೂಡಿ ಆದೇಶ ನೀಡಲಾಗಿದೆ.
ಈ ಕುರಿತು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಸಹ ಪರೀಕ್ಷೆ ಮುಂದೂಡಿಕೆ ಕುರಿತು ವಿನಯವಾಣಿಗೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಅಂದಿನ ಪೇಪರ್ ಪರೀಕ್ಷೆ ರದ್ದುಗೊಳಿಸಿದ್ದು, ಸೆ.29 ರಂದು ನಡೆಸಲಾಗುತ್ತದೆ ಎಂದು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.