Homeಅಂಕಣಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

(Biometric) ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಅವರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯ ಸರ್ಕಾರವು ಹಲವು ಸುತ್ತೋಲೆಗಳ ಮೂಲಕ ರಾಜ್ಯ ಸರ್ಕಾರದ ಕಚೇರಿಗಳು ಸೇರಿ ಅಧೀನಕ್ಕೊಳಪಡುವ ಎಲ್ಲಾ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿ, ನೌಕರರ ದೈನಂದಿನ ಹಾಜರಾತಿಯನ್ನು ಬಯೋಮೆಟ್ರಿಕ್ ಯಂತ್ರದ ಮೂಲಕ ದಾಖಲಿಸಲು ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ನಿರ್ದೇಶನಗಳನ್ನು ನೀಡಿದೆ. ಆದರೂ ಹಲವೆಡೆ ಈವರೆಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅಳವಡಿಕೆಯಾಗಿಲ್ಲ.

ಈವರೆಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಹೀಗಾಗಿ ಸರ್ಕಾರಿ ಕಚೇರಿಗಳಲ್ಲಿ ಜುಲೈ ೬ರೊಳಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅವಡಿಸಿರುವ ವರದಿ ನೀಡಬೇಕು ಎಂದು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯರ್ಶಿಗಳಿಗೆ ಸೂಚನೆ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button