ಅನರ್ಹರು ಉಪ ಚುನಾವಣೆಗೆ ಸ್ಪರ್ಧಿಸಲು ಅರ್ಹರಾ..?
ಅನರ್ಹ ಶಾಸಕರ ಪ್ರಕರಣ ವಿಚಾರಣೆ ಮುಂದೂಡಿಕೆ
ದೆಹಲಿಃ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಅರ್ಜಿವಿಚಾರಣೆ ಮತ್ತೆ ಸುಪ್ರೀಂಕೋರ್ಟ್ ಬುಧವಾರಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ಕೆಲವು ಪ್ರಮುಖ ಅಂಶಗಳನ್ನು ಗಮನಿಸಬಹುದು. ಅನರ್ಹರು ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ ಎಂದು ಸುಪ್ರೀಂ ತಿಳಿಸಿದೆ ಎನ್ನಲಾಗಿದೆ.
ಆಗ ಅನರ್ಹಗೊಳಿಸುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಗುಂಡುರಾವ್ ಅವರು ಸ್ಪೀಕರ್ ಅವರಿಗೆ ಮನವಿ ಸಲ್ಲಿಸಿರುವ ಹಿನ್ನೆಲೆ ಇಂದು ಸುಪ್ರೀಂಕೋರ್ಟ್ ಅವರಿಗೆ ನೊಟೀಸ್ ಜಾರಿ ಮಾಡಿದೆ ಎನ್ನಲಾಗಿದೆ.
ಮತ್ತು ಸ್ಪೀಕರ್ ಕಚೇರಿ ಸೇರಿದಂತೆ ಜೆಡಿಎಸ್ ರಾಜ್ಯ ಅಧ್ಯಕ್ಷ ಕುಮಾರಸ್ವಾಮಿ ಅವರಿಗೂ ಸಹ ನೋಟಿಸ್ ಜಾರಿ ಮಾಡಲಾಗಿದೆ.
ಒಟ್ಟಾರೆ ಬುಧವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಿದ್ದು, ಚುನಾವಣೆಗೆ ಸ್ಪರ್ಧಿಸಲು ಅನರ್ಹರಿಗೆ ಅವಕಾಶವಿದೆ ಎಂಬ ಹೇಳಿಕೆಯನ್ನು ಸುಪ್ರೀಂ ನಮೂದಿಸಿದೆ ಎಂದು ಹೇಳಲಾಗುತ್ತಿದೆ.
ಅನರ್ಹರು ಚುನಾವಣೆಗೆ ಅರ್ಹರಾ ಅಥವಾ ಅನರ್ಹರಾ ಎಂಬುದು ಸ್ಪಷ್ಟತೆ ಇಲ್ಲವೆಂದು ಹೇಳಲಾಗುತ್ತಿದೆ. ಆದರೆ ಚುಣಾವಣೆಗೆ ಸ್ಪರ್ಧಿಸಲು ಯಾವುದೇ ಆಕ್ಷೆಪವಿಲ್ಲ ಸುಪ್ರೀಂ ಒಂದು ಹಂತದಲ್ಲಿ ಹೇಳಿರುವದರಿಂದ ಅನರ್ಹರು ಉಪ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಕಾನೂನು ತಜ್ಞರ ಅಭಿಪ್ರಾಯವಾಗಿದೆ.