ಪ್ರಮುಖ ಸುದ್ದಿ
ಬೆಂಗಳೂರು ಕಚೇರಿಯಲ್ಲಿ ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿಗೆ ಚಾಕು ಇರಿತ, ಆರೋಪಿ ಅರೆಸ್ಟ್!
ಬೆಂಗಳೂರು : ಲೋಕಾಯುಕ್ತ ಕಚೇರಿಗೆ ಬಂದಿದ್ದ
ತೇಜಸ್ ಶರ್ಮಾ ಎಂಬ ವ್ಯಕ್ತಿ ಏಕಾಏಕಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿದ ಘಟನೆ ನಡೆದಿದೆ. ಪರಿಣಾಮ ಮೂರು ಕಡೆ ವಿಶ್ವನಾಥ ಶೆಟ್ಟಿ ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ತಕ್ಷಣಕ್ಕೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡಿರುವ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪೊಲೀಸರು ಆರೋಪಿ ತೇಜಸ್ ಶರ್ಮಾನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.