ಸಂಸ್ಕೃತಿ
ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪುತ್ರಿ!
ಮೈಸೂರು : ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬನ್ಸೂರಿ ಸ್ವರಾಜ್ ಸಾಂಸ್ಕೃತಿಕ ನಗರ ಮೈಸೂರು ಪ್ರವಾಸಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಸಂಸದ ಪ್ರತಾಪ ಸಿಂಹ ಅವರ ಜೊತೆಗೆ ತನ್ನ ಸ್ನೇಹಿತಿಯೊಬ್ಬರ ಜೊತೆ ಬನ್ಸೂರಿ ಸ್ವರಾಜ್ ವಿವಿಧ ಪ್ರೇಕ್ಷಣೀಯ ತಾಣಗಳನ್ನು ವೀಕ್ಷಿಸಿದರು.
ಮೈಸೂರು ಅರಮನೆ , ಮೃಗಾಲಯ ಸೇರಿದಂತೆ ವಿವಿದೆಡೆ ಭೇಟಿ ನೀಡಿದರು. ಸಾಂಸ್ಕೃತಿಕ ವೈಭವ ಕಂಡು ಬೆರಗಾದರು. ಮೈಸೂರು ಸಂಸದ ಪ್ರತಾಪ ಸಿಂಹ ಅವರಿಂದ ಮೈಸೂರು ಕುರಿತ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಮೈಸೂರು ಭೇಟಿಯ ನೆನಪಿಗಾಗಿ ಫೋಟೋ ಕ್ಲಿಕ್ಕಿಸಿಕೊಂಡರು.