ದೋರನಹಳ್ಳಿಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ ಕುಟುಂಬಕ್ಕೆ ಸಾಂತ್ವನ
ದೋರನಹಳ್ಳಿಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ ಕುಟುಂಬಕ್ಕೆ ಸಾಂತ್ವನ
ಯಾದಗಿರಿಃ ಶಹಾಪುರ ತಾಲೂಕಿನ ದೊರನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ತಗುಲಿದ ಬೆಂಕಿಗೆ ಸಿಲಿಂಡರ್ ಸ್ಪೋಟಗೊಂಡಿದ್ದು, 18 ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಳುಗಳಿಗೆ ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕೆತ್ಸೆ ನಿಡಲಾಗಿದ್ದು ಗಾಯಗೊಂಡವರಲ್ಲಿ ಬಹುತೇಕರ ಸ್ಥಿತಿ ಗಂಭೀರವಾಗಿದೆ ಹೆಚ್ಚಿನ ಚಿಕೆತ್ಸೆಗೆ ಕಲಬುರ್ಗಿ ಜಿಲ್ಲಾ ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ.
ಗ್ರಾಮದಲ್ಲಿನ ಕುಟುಂಬವೊಂದು ಸೀಮಂತ ಕಾರ್ಯಕ್ರಮ ಇಟ್ಟುಕೊಂಡಿತ್ತು, ಈ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಪುಟ್ಟ ಮಕ್ಕಳು ಸೇರಿ 18 ಜನರಿಗೆ ಗಂಭೀರ ಗಾಯಗಳಾಗಿವೆ ಅವರಿಗೆ ಅಗತ್ಯ ಸೂಕ್ತ ಚಿಕಿತ್ಸೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಈ ಘಟನೆಯ ಕುರಿತು ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಅಧಿಕಾರಿಗಳಿಗೆ ವರದಿ ನೀಡಲು ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲೆಯಿಂದ ವೈದ್ಯರನ್ನು ಕಲಬುರಗಿ ಆಸ್ಪತ್ರೆಗೆ ನಿಯೋಜಿಸಿ ಚಿಕಿತ್ಸೆ ಪಡೆಯುತ್ತಿರುವವರ ಬಗ್ಗೆ ಹೆಚ್ಚಿನ ಕಾಳಜಿವಹಿಸಿ ಪ್ರತಿಕ್ಷಣ ಮಾಹಿತಿ ಒದಗಿಸಲು ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಸಿಲಿಂಡರ್ ಏಜೆನ್ಸಿಯವರ ತಪ್ಪು ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ತಿಳಿಸಿದರು.
7 ಹೆಣ್ಣು ಮತ್ತು 11 ಗಂಡು ಒಟ್ಟು 18 ಜನರು ಗಾಯಗೊಂಡವರು ಇದರಲ್ಲಿ ( ಮೂರು ಮಕ್ಕಳು).ಆದ್ಯ ತಂದೆ ಬಾಬುರಾವ್ ವಯಸ್ಸು 3 ವರ್ಷ, ಮಹಾಂತೇಶ ತಂದೆ ಸಂಗಣ್ಣ ವಯಸ್ಸು 1.5 ವರ್ಷ, ನಿಂಗಮ್ಮ ಗಂಡ ಬಸವಂತರಾಯ ವಯಸ್ಸು 90 ಸೇರಿದಂತೆ ಒಬ್ಬ ಮಹಿಳೆ ಮತ್ತು ಇಬ್ಬರು ಮಕ್ಕಳು ಸಾವನಪ್ಪಿದ್ದಾರೆ. ಎಂದು ಶಹಾಪುರ ತಾಲೂಕು ವೈದ್ಯಾಧಿಕಾರಿ ಮತ್ತು ತಹಶೀಲ್ದಾರರು ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಯಾದಗಿರಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ವೇದಮೂರ್ತಿ, ಸಹಾಯಕ ಆಯುಕ್ತ ಶಾ ಆಲಂ ಹುಸೇನ್, ಶಹಾಪುರ ತಹಶೀಲ್ದಾರ ಮಧುರಾಜ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಾಜು, ಜಿಲ್ಲಾ ನೋಡಲ್ ಅಧಿಕಾರಿ .ಭಗವಂತ ಅನ್ವರ, ಆರ್ಸಿಎಚ್ಓ ಡಾ.ಲಕ್ಷ್ಮೀಕಾಂತ ಒಂಟಿಪೀರ, ಶಹಾಪುರ ತಾಲೂಕು ವೈದ್ಯಾಧಿಕಾರಿ ಡಾ.ರಮೇಶ ಗುತ್ತೇದಾರ ಇನ್ನಿತರರು ಉಪಸ್ಥಿತರಿದ್ದರು.