ಪ್ರಮುಖ ಸುದ್ದಿ
ಸಮೋಸಾ ತಿಂದ ಮೂವರು ವಿದ್ಯಾರ್ಥಿಗಳು ಸಾವು

ಸಮೋಸಾ ತಿಂದು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 24 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ.
ಈ ಭಯಾನಕ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಕೈಲಾಸಪಟ್ಟಣದ ಅನಾಥಾಶ್ರಮದಲ್ಲಿ ನಡೆದಿದೆ. ಕೈಲಾಸಪಟ್ಟಣದ ಅನಾಥಶ್ರಮದಲ್ಲಿ ಸಮೋಸಾ ತಿಂದ ಕೆಲವೇ ಗಂಟೆಗಳಲ್ಲಿ ಫುಡ್ ಪಾಯಿಸನ್‌ನಿಂದ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ.
ಒಟ್ಟು 27 ವಿದ್ಯಾರ್ಥಿಗಳನ್ನ ನರಸೀಪಟ್ಟಣಂ, ಅನಕಪಲ್ಲಿ ಹಾಗೂ ವಿಶಾಖಪಟ್ಟಣಂನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸಮೋಸಾ ವಿಷಕಾರಿಯಾಗಿದ್‌ದರಿಂದ ಮೂವರು ಮಕ್ಕ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.