Homeಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

BUDGET 2024 BREAKING: ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂ.ವರೆಗೆ ಸಾಲ ಘೋಷಣೆ…!

ನವದೆಹಲಿ: ನೂತನ ಕೇಂದ್ರ ಸರ್ಕಾರದ ಬಜೆಟ್ ಅನ್ನು ಇಂದು ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಸಂಸತ್ತು ಭವನದಲ್ಲಿ ಏಳನೇ ಬಾರಿ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಬಜೆಟ್‌ ಮಂಡನೆ ಮಾಡುತ್ತಿರುವ ವೇಳೆಯಲ್ಲಿ ನಿರ್ಮಾಲ ಸೀತರಾಮನ್‌ ಅವರು  ತಮ್ಮ ಬಜೆಟ್‌ ಆರಂಭಕ್ಕೂ ಮುನ್ನ ಪ್ರಧಾನಿ ನರೇಂಧ್ರ ಮೋದಿಯವರನ್ನು ಗುಣಗಾನ ಮಾಡಿದರು.

“ಭಾರತದ ಜನರು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಮೇಲೆ ನಂಬಿಕೆ ಇಟ್ಟಿದ್ದಾರೆ ಮತ್ತು ಐತಿಹಾಸಿಕ ಮೂರನೇ ಅವಧಿಗೆ ಅದನ್ನು ಮರು ಆಯ್ಕೆ ಮಾಡಿದ್ದಾರೆ” ಎಂದು ಹಣಕಾಸು ಸಚಿವರು ಹೇಳಿದರು. 5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಒದಗಿಸಲು 2 ಲಕ್ಷ ಕೋಟಿ ರೂ.ಗಳ ಕೇಂದ್ರ ವೆಚ್ಚದೊಂದಿಗೆ 5 ಯೋಜನೆಗಳು ಮತ್ತು ಉಪಕ್ರಮಗಳ ಪ್ರಧಾನ ಮಂತ್ರಿಗಳ ಪ್ಯಾಕೇಜ್ ಅನ್ನು ಘೋಷಿಸಲು ನನಗೆ ಸಂತೋಷವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ವರ್ಷ ನಾವು ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ರೂ.ಗಳನ್ನು ಒದಗಿಸಿದ್ದೇವೆ ಅಂಥ ತಿಳಿಸಿದರು. ಈ ವರ್ಷ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ 1.52 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ದೇಶೀಯ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂ.ವರೆಗಿನ ಸಾಲಕ್ಕೆ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button