ಪ್ರಮುಖ ಸುದ್ದಿ
ಇಂದು ಸಂಜೆ 6 ಗಂಟೆಗೆ ಬಿಎಸ್ ವೈ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ
ಬೆಂಗಳೂರು: ಇಂದು ಸಂಜೆ 6 ಗಂಟೆಗೆ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆಂಜನೇಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ 10 ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿವಾಲಾ ಅವರನ್ನು ಯಡಿಯೂರಪ್ಪ ಭೇಟಿಮಾಡಿ ಸರ್ಕಾರ ರಚನೆಗೆ ಅವಕಾಶ ಕೋರಿ ಮನವಿ ಮಾಡಿದ್ದರು.