ಪ್ರಮುಖ ಸುದ್ದಿ
ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ, ಸ್ಥಳದಲ್ಲೇ ಮೂವರು ಯುವಕರು ಸಾವು!
ಯಾದಗಿರಿ : ಜಿಲ್ಲೆಯ ಸುರಪುರ ತಾಲ್ಲೂಕಿನ ಚೆನ್ನೂರು ಗ್ರಾಮದ ಕ್ರಾಸ್ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕಿನಲ್ಲಿದ್ದ ಮೂವರು ಯುವಕರು ಸಾವಿಗೀಡಾದ ದಾರುಣ ಘಟನೆ ನಡೆದಿದೆ. ಮತ್ತೋರ್ವ ಬಾಲಕಿ ಗಂಭೀರ ಗಾಯಗೊಂಡಿದ್ದು ಹುಣಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಮೃತರನ್ನು ಸುರಪುರ ತಾಲ್ಲೂಕಿನ ಬೇವಿನಹಾಳ್ ಹಾಗೂ ದೇವಕಲ್ ಗ್ರಾಮದ ನಿವಾಸಿಗಳಾದ ರಾಯಪ್ಪ (29), ಯಂಕಪ್ಪ ( 32) ಹಾಗೂ ಬಸ್ಸಪ್ಪ (25) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಣಸಗಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.