ಜೆಡಿಎಸ್ – ಕಾಂಗ್ರೆಸ್ ಪಕ್ಷಗಳಿಗೆ ಬಿ.ಎಸ್.ಯಡಿಯೂರಪ್ಪ ಸವಾಲು?
ದಾವಣಗೆರೆ : ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಈಗಾಗಲೇ ಕಚ್ಚಾಟ ಶುರುವಾಗಿದೆ. ಕಾಂಗ್ರೆಸ್ ಪ್ರಮುಖರ ಸಭೆಗೆ ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್ ಗೈರಾಗಿದ್ದಾರೆ. ಸಚಿವ ಸಂಪುಟ ರಚನೆಯ ಬಳಿಕ ಈ ಸರ್ಕಾರದ ನಿಜ ಪರಿಸ್ಥಿತಿ ತಿಳಿಯಲಿದೆ. ರಾಜ್ಯದ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದ ಅನುಕೂಲ ಸಿಂಧು ರಾಜಕಾರಣ ಕಂಡು ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಬೇಕೆಂದು ಬಯಸುತ್ತಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಜನ ಸಮ್ಮಿಶ್ರ ಸರಕಾರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ನೈತಿಕತೆ ಇದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬರಲಿ ಎಂದು ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ. ವಿಧಾನ ಪರಿಷತ್ ಚುನಾವಣ ಪ್ರಚಾರದ ವೇಳೆ ಮಾತನಾಡಿದ ಯಡಿಯೂರಪ್ಪ ಯಾವುದೇ ಕ್ಷಣದಲ್ಲಿ ಬೇಕಾದರೂ ಚುನಾವಣೆ ಬರಬಹುದು. ಈಸಲ ಬಿಜೆಪಿ 150 ಸ್ಥಾನ ಗೆಲ್ಲುವುದು ಗ್ಯಾರಂಟಿ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.