ಪ್ರಮುಖ ಸುದ್ದಿ
ದೋಸ್ತಿ ಸರ್ಕಾರದ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್!
ಬೆಂಗಳೂರು: ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ತಂತ್ರ ರೂಪಿಸಿರುವ ದೋಸ್ತಿ ಪಕ್ಷದ ಮುಖಂಡರು ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಜೂನ್ 12ರಂದು ಬೆಳಗ್ಗೆ 11:30 ಕ್ಕೆ ಮೂವರಿಗೆ ಮಂತ್ರಿ ಪದವಿ ನೀಡಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ. ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಈ ಬಗ್ಗೆ ತಿಳಿಸಿದ್ದಾರೆನ್ನಲಾಗಿದೆ
ಇಬ್ಪರು ಪಕ್ಷೇತರ ಶಾಸಕರು ಹಾಗೂ ಹಿರಿಯ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿಗೆ ಸಚಿವಗಿರಿ ಸಿಗಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಕೊನೆಯ ಹಂತದಲ್ಲಿ ಯಾವ ನಿರ್ಣಯ ಕೈಗೊಳ್ಳಲಿದ್ದಾರೆ, ಯಾರಿಗೆ ಮಂತ್ರಿಗಿರಿಯ ಅದೃಷ್ಟ ಒಲಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.