Homeಜನಮನಪ್ರಮುಖ ಸುದ್ದಿ

ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 56 ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆಯೇ ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 56 ಕಡೆಗಳಲ್ಲಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.​​

11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. ಕೋಲಾರ ತಹಶೀಲ್ದಾರ್​ ವಿಜಿಣ್ಣ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಅತ್ತ ಹಾಸನದಲ್ಲಿ ಗ್ರೇಡ್-1 ಕಾರ್ಯದರ್ಶಿ ಜಗದೀಶ್​ ಮನೆ ಮೇಲೆ ದಾಳಿ ನಡೆದಿದೆ. ದಾವಣಗೆರೆ EE D.H ಉಮೇಶ್, AAEE ಪ್ರಭಾಕರ್ ಮನೆಗಳ ಮೇಲೆ ರೇಡ್‌ ಆಗಿದೆ. ದಾಳಿಯಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Related Articles

Leave a Reply

Your email address will not be published. Required fields are marked *

Back to top button