ಪ್ರಮುಖ ಸುದ್ದಿ
ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ : ಇಬ್ಬರು ಸಾವು, ಐವರಿಗೆ ಗಾಯ
ಕಲಬುರಗಿ: ಹಸನಾಪುರ ಕ್ರಾಸ್ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ಜೇವರಗಿ ಮೂಲದ ನಯೀಮ್(16), ತೆಲಂಗಾಣ ಮೂಲದ ಖಾಜಾ ಹುಸೇನ್ (19) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.