ಪ್ರಮುಖ ಸುದ್ದಿ
ಕಲಬುರಗಿ : ಸಿಡಿಲಿಗೆ ಮೂವರು ಬಲಿ, ನಾಲ್ವರಿಗೆ ಗಾಯ
ಕಲಬುರಗಿ: ಸಿಡಿಲು ಬಡಿದು ಮನೆ ಛಾವಣಿ ಕುಸಿದು ಬಿದ್ದ ಪರಿಣಾಮ ನಿದ್ರೆಯಲ್ಲಿದ್ದ ಮೂವರು ಸಾವನ್ನಪ್ಪಿದ್ದು ನಾಲ್ವರು ಗಾಯಗೊಂಡಿರುವ ಘಟನೆ ಕಾಳಗಿ ತಾಲೂಕಿನ ಮಂಗಲಗಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಅಬಿದಾಬಿ, ಶಫೀಕ್, ಅಲ್ದಿಯಾ ಎಂದು ಗುರುತಿಸಲಾಗಿದೆ. ಗಾಯಾಳುಗಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈ ಬಗ್ಗೆ ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.