Homeಜನಮನಪ್ರಮುಖ ಸುದ್ದಿವಿನಯ ವಿಶೇಷ
ರೈತರಿಗೆ ಗುಡ್ ನ್ಯೂಸ್ : ಪಿಎಂ ಕಿಸಾನ್ ಯೋಜನೆಯಲ್ಲಿ ಹಣದ ಮೊತ್ತ ಹೆಚ್ಚಳ ಸಾಧ್ಯತೆ

ಬಾರಿಯ ಕೇಂದ್ರ ಬಜೆಟ್‌ನಲ್ಲಿ ಪಿಎಂ ಕಿಸಾನ್ ಯೋಜನೆಯ ಅನುದಾನ ಹೆಚ್ಚಿಸುವ ಸಾಧ್ಯತೆ ಇದೆ. ಈ ಯೋಜನೆಯಲ್ಲಿ ಈಗ ವರ್ಷಕ್ಕೆ 6,000 ರೂ. ನೀಡಲಾಗುತ್ತಿದ್ದು, ಅದನ್ನು 8,000 ರೂ.ಗೆ ಹೆಚ್ಚಿಸಲು ಸರ್ಕಾರ ಯೋಜಿಸಿರುವುದು ತಿಳಿದು ಬಂದಿದೆ.
ಈಗ ಪ್ರತಿ ನಾಲ್ಕು ತಿಂಗಳಿಗೊಮ್ಮೆ, ಅಂದರೆ ವರ್ಷದಲ್ಲಿ ಮೂರು ಬಾರಿ ತಲಾ 2,000 ರೂ. ಕಂತುಗಳಲ್ಲಿ ರೈತರಿಗೆ ಹಣ ಕೊಡಲಾಗುತ್ತಿದೆ. ಈಗ ಕಂತುಗಳ ಸಂಖ್ಯೆಯನ್ನು ಎಂಟು ಸಾವಿರ ರೂ.ಗೆ ಹೆಚ್ಚಿಸಬಹುದು ಎನ್ನುವಂತಹ ಸುದ್ದಿ ಹರಿದಾಡುತ್ತಿದೆ.