Homeಜನಮನಪ್ರಮುಖ ಸುದ್ದಿ

ತಿರುಪತಿ ಲಡ್ಡು ವಿವಾದ: ಆಂಧ್ರ ಸರ್ಕಾರದಿಂದ 9 ಸದಸ್ಯರ ತಂಡ ರಚನೆ

ಹೈದರಾಬಾದ್: ತಿರುಪತಿ ಲಡ್ಡು ವಿವಾದದ ಹಿನ್ನೆಲೆ ತನಿಕೆ ನಡೆಸಲು ಆಂಧ್ರಪ್ರದೇಶ ಸರ್ಕಾರವು 9 ಸದಸ್ಯರ ತಂಡವನ್ನು ರಚನೆ ಮಾಡಿದೆ.

ಗುಂಟೂರು ರೇಂಜ್ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಸರ್ವಶ್ರೇಷ್ಠ ತ್ರಿಪಾಠಿ ನೇತೃತ್ವದಲ್ಲಿ ತಿರುಪತಿ ಲಡ್ಡಿಗೆ ಸಂಬಂಧಿಸಿದಂತೆ ತನಿಖೆ ನಡೆಯಲಿದೆ. ತಿರುಮಲದಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ನಡೆದಿರುವ ಇತರ ಅಕ್ರಮಗಳ ಕುರಿತು ತನಿಖೆ ನಡೆಯಲಿದೆ.

ಆಂಧ್ರ ಸರ್ಕಾರ ರಚಿಸಿರುವ ಸದಸ್ಯರ ತಂಡದಲ್ಲಿ ಸರ್ವಶ್ರೇಷ್ಠ ತ್ರಿಪಾಠಿ, 2006ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ, ಈ ಹಿಂದೆ ಸಂಯೋಜಿತ ಗುಂಟೂರು ಮತ್ತು ಕೃಷ್ಣ ಜಿಲ್ಲೆಗಳಿಗೆ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್‌ಪಿ) ಸೇವೆ ಸಲ್ಲಿಸಿದ್ದರು. ತ್ರಿಪಾಠಿಯ ಹೊರತಾಗಿ, ಎಸ್‌ಐಟಿ ತಂಡವು ವಿಶಾಖಪಟ್ಟಣಂ ರೇಂಜ್‌ಗೆ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿರುವ ಗೋಪಿನಾಥ್ ಜಟ್ಟಿ, ಐಪಿಎಸ್ ಸೇರಿದಂತೆ ಇತರ ಪ್ರಮುಖರನ್ನು ಒಳಗೊಂಡಿದೆ.

ತಿರುಪತಿ ತಯಾರಿಕೆಯಲ್ಲಿ ಹಂದಿ, ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಮಾಜಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇತರರ ವಿರುದ್ಧ ಹೈದರಾಬಾದ್‌ನಲ್ಲಿ ದೂರು ದಾಖಲಾಗಿರುತ್ತದೆ.

Related Articles

Leave a Reply

Your email address will not be published. Required fields are marked *

Back to top button