ಪ್ರಮುಖ ಸುದ್ದಿ
ಅಪಘಾತ : ಬೈಕ್ ಸವಾರ ಸಾವು
ಯಾದಗಿರಿಃ ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಕ್ರಾಸ್ ಹತ್ತಿರ ನಡೆದಿದೆ.
ರಾತ್ರಿ ಶಹಾಪುರ ನಗರದಿಂದ ಸ್ವಗ್ರಾಮ ಹತ್ತಿಗುಡೂರು ಗ್ರಾಮಕ್ಕೆ ತೆರಳುತ್ತಿದ್ದ ಬೈಕ್ ಸವಾರ ಶರಣಗೌಡ ಪೊಲೀಸ್ ಪಾಟೀಲ್(೩೬) ಸಾ.ಹತ್ತಿಗೂಡೂರ ಎಂಬಾತನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.
ರಾತ್ರಿ 10 ಗಂಟೆಯ ಸಮಯದಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.