ಪ್ರಮುಖ ಸುದ್ದಿ
ಕಾಂಗ್ರೆಸ್ ಪಕ್ಷವನ್ನು ‘ಬೇಲ್ ಗಾಡಿ’ ಎಂದು ಕರೆದ ಪ್ರಧಾನಿ ಮೋದಿ
ಜೈಪುರ : ಕಾಂಗ್ರೆಸ್ ಪಕ್ಷದ ನಾಯಕರು ಅನೇಕರು ಬೇಲ್ ಮೇಲೆ ಹೊರಗಿದ್ದಾರೆ. ಪರಿಣಾಮ ಇತ್ತೀಚೆಗೆ ಕಾಂಗ್ರೆಸ್ ಪಕ್ಷವನ್ನು ಜನ ಬೇಲ್ ಗಾಡಿ ಎಂದು ಕರೆಯುತ್ತಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ. ಕೈ ಪಕ್ಷದ ದಿಗ್ಗಜರು , ಮಾಜಿ ಸಚಿವರೂ ಬೇಲ್ ಮೇಲೆ ಹೊರಗಿದ್ದಾರಲ್ಲವೇ ಎಂದು ಜನರನ್ನು ಪ್ರಶ್ನಿಸಿದ್ದಾರೆ.
ರಾಜಸ್ಥಾನ ಸರ್ಕಾರದ ಜನಕಲ್ಯಾಣ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಚಾಲನೆ ನೀಡಿ ಪ್ರಧಾನಿ ಮಾತನಾಡಿದರು. ಕೆಲವು ಒಳ್ಳೆಯ ಕೆಲಸಗಳನ್ನೂ ಟೀಕಿಸುತ್ತಾರೆ. ಅಷ್ಟೇ ಅಲ್ಲದೆ ನಮ್ಮ ವೀರ ಸೈನಿಕರು ನಡೆಸಿದ ಸರ್ಜಿಕಲ್ ಸ್ಟ್ರೈಕ್ , ಸೈನಿಕರ ಸಾಮರ್ಥ್ಯದ ಬಗ್ಗೆ ಪ್ರಶ್ನಿಸಿ ಪಾಪ ಎಸಗಿದ್ದಾರೆ ಎಂದು ಕಿಡಿಕಾರಿದ್ದಾರೆ.