Homeಪ್ರಮುಖ ಸುದ್ದಿವಿನಯ ವಿಶೇಷ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ರೆಡ್‌ ಎಲರ್ಟ್ ಘೋಷಣೆ

ಜುಲೈನಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ರಾಜ್ಯದ ಈಗಿನ ಈ ಮಳೆಯ ವಾತಾವರಣವು ಜೂನ್ 28ರ ತನಕ ಮುಂದುವರಿಯುವ ಲಕ್ಷಣಗಳಿವೆ. ಜೂನ್ 29ರಿಂದ ಉತ್ತರ ಭಾರತದಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ. 

ಉಡುಪಿ ಜಿಲ್ಲೆಯಾದ್ಯಂತ ಭಾರಿ (red alert) ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ ಉಡುಪಿ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆ ಇದ್ದರೆ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ (red alert) ಮಳೆಯ ಮುನ್ಸೂಚನೆ ಇದೆ. ಕೊಡಗು ಸಹ ಭಾರಿ ಮಳೆಯ ಮುನ್ಸೂಚೆನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳು ಉತ್ತಮವಾಗಿ ಬೀಸುತ್ತಿದ್ದರೂ ಕರಾವಳಿಯಿಂದ ಈಚೆ ಬರುತ್ತಿದ್ದಂತೆ ದುರ್ಬಲಗೊಳ್ಳುತ್ತಿದೆ. ಆ ಕಾರಣದಿಂದ ನಿರೀಕ್ಷಿತ ಪ್ರಮಾಣದಲ್ಲಿ ಅಥವಾ ಮುನ್ಸೂಚನೆಯಲ್ಲಿ ಕಾಣಿಸುವಷ್ಟು ಮಳೆಯಾಗುತ್ತಿಲ್ಲ. ಜುಲೈನಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ರಾಜ್ಯದ ಈಗಿನ ಈ ಮಳೆಯ ವಾತಾವರಣವು ಜೂನ್ 28ರ ತನಕ ಮುಂದುವರಿಯುವ ಲಕ್ಷಣಗಳಿವೆ. ಜೂನ್ 29ರಿಂದ ಉತ್ತರ ಭಾರತದಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ.

Related Articles

Leave a Reply

Your email address will not be published. Required fields are marked *

Back to top button