Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ

ಚಿಕಿತ್ಸೆ ಸಿಗದೆ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಮಮತಾ

ಕೋಲ್ಕತ್ತ: ಕಿರಿಯ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಪರಿಣಾಮ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ವೈದ್ಯರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಚಿಕಿತ್ಸೆಯಲ್ಲಿ ಅಡಚಡಣೆ ಉಂಟಾಗಿದೆ. ಈ ಹಿನ್ನೆಲೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಸಿಗದೆ 29 ಮಂದಿ ಸಾವನ್ನಪ್ಪಿದ್ದಾರೆ. ಇದು ಅತ್ಯಂತ ದುರದೃಷ್ಟಕರ ವಿಷಯ. ಇದರಿಂದಾಗಿ ಮನಸ್ಸಿಗೆ ನೋವಾಗಿದೆ ಎಂದು ಬರೆದುಕೊಂಡಿದ್ದಾರೆ.

ಮೃತರ ಕುಟುಂಬಗಳಿಗೆ ಸಹಾಯ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಒದಗಿಸುವುದಾಗಿ ಮಮತಾ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button