Homeಪ್ರಮುಖ ಸುದ್ದಿವಿನಯ ವಿಶೇಷ

ಗ್ರಾಮ ಪಂಚಾಯತ್ ಗಳಲ್ಲಿ ಜನನ, ಮರಣ ನೋಂದಣಿ ಪ್ರಾರಂಭ

(Births-Deaths Certificate) ಗ್ರಾಮೀಣ ಪ್ರದೇಶದ ಜನರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಗುಡ್ ನ್ಯೂಸ್ ನೀಡಿದ್ದಾರೆ. ಹೌದು, ಇದೀಗ ಜನನ-ಮರಣ ನೋಂದಣಿ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯಲ್ಲಿ ಮಾಡಲು ಅವಕಾಶ ಕಲ್ಪಿಸಿದ್ದು, ಇದಕ್ಕಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಈ ಪ್ರಕ್ರಿಯೆ ಜುಲೈ 1ರಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈಗ 72 ಸೇವೆಗಳು ಲಭ್ಯವಿದ್ದು, ಜನನ, ಮರಣ ನೋಂದಣಿ 73ನೆ ಸೇವೆಯಾಗಿ ಸೇರ್ಪಡೆಗೊಳ್ಳುತ್ತಿದೆ. ಇದೂ ಸೇರಿ ಒಟ್ಟು 9 ಸೇವೆಗಳನ್ನು ಜನನ, ಮರಣ ನೋಂದಣಿಗೆ ಸೇರಿದಂತೆ ಒದಗಿಸಲಾಗುತ್ತಿದೆ. ಜನನ ನೋಂದಣಿ, ಜನನ ಪ್ರಮಾಣ ಪತ್ರ ತಿದ್ದುಪಡಿ, ಜನನ ಪ್ರಮಾಣ ಪತ್ರ ವಿತರಣೆ, ಮಗುವಿನ ಹೆಸರು ಸೇರ್ಪಡೆ, ನಿರ್ಜೀವ ಜನನ ನೋಂದಣಿ, ನಿರ್ಜೀವ ಜನನ ಪ್ರಮಾಣ ಪತ್ರ ವಿತರಣೆ, ಮರಣ ನೋಂದಣಿ, ಮರಣ ಪ್ರಮಾಣ ಪತ್ರ ತಿದ್ದುಪಡಿ ಹಾಗೂ ಮರಣ ಪ್ರಮಾಣ ಪತ್ರ ವಿತರಣೆ ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರದಲ್ಲಿ ಒದಗಿಸಲಾಗುತ್ತದೆ.

ಜನನ, ಮರಣ ನೋಂದಣಿ ಸಂಬಂಧದಲ್ಲಿ ಸಂದೇಹ/ಸ್ಪಷ್ಟೀಕರಣ ಅವಶ್ಯಕತೆಯಿದ್ದಲ್ಲಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ಹಾಗೂ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಹಾಗೂ ಇ-ಮೇಲ್ crbdkar@gmail.com/ejanmahelpdesk@gmail.com ಮತ್ತು ಇ-ಜನ್ಮ ಸಹಾಯವಾಣಿ 1800-425-6578 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

Related Articles

Leave a Reply

Your email address will not be published. Required fields are marked *

Back to top button