Homeಜನಮನಪ್ರಮುಖ ಸುದ್ದಿವಿನಯ ವಿಶೇಷ

‘ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರು ಕಾರಣ’- ಮುಖ್ಯಮಂತ್ರಿ

ಬೆಂಗಳೂರು: ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನಾಡಪ್ರಭು ಕೆಂಪೇಗೌಡರ515 ನೇ ಜನ್ಮಾದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಜನಾನುರಾಗಿ ಪ್ರಭುಗಳು. ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದಲ್ಲದೆ ಅನೇಕ ಕೆರೆಗಳನ್ನು ಕಟ್ಟಿಸಿದರು. ಅವರ ಕಾಲದಲ್ಲಿಯೇ ಅತಿ ಹೆಚ್ಚು ದೇವಸ್ಥಾನ, ಕೆರೆಗಳು ನಿರ್ಮಾಣವಾಯಿತು. ವೃತ್ತಿಯಾಧಾ ರದ ಮೇಲೆ ಚಿಕ್ಕಪೇಟೆ, ದೊಡ್ಡಪೇಟೆ, ನಗರ್ತಪೇಟೆ , ತಿಗಳರಪೇಟೆ, ಬಳೆಪೇಟೆಗಳನ್ನು ನಿರ್ಮಿಸಿ ನಗರವನ್ನು ವ್ಯಾಪಾರ ಕೇಂದ್ರವನ್ನಾಗಿಸಲು ಪ್ರಯತ್ನಪಟ್ಟರು ಎಂದರು.

ಮೊದಲ ಬಾರಿಗೆ ಕೆಂಪೇಗೌಡರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ತೀರ್ಮಾನ ಮಾಡಿದ್ದು, ಕೆಂಪೇಗೌಡರ ಪ್ರಾಧಿಕಾರ ರಚನೆ ಮಾಡಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಂದು ಸ್ಮರಿಸಿದರು. ಕೆಂಪೇಗೌಡರ ಅವರ ಆಡಳಿತ ನಮಗೆಲ್ಲಾ ಪ್ರೇರಣೆಯಾಗಿದೆ ಎಂದರು.

Related Articles

Leave a Reply

Your email address will not be published. Required fields are marked *

Back to top button