Homeಜನಮನಪ್ರಮುಖ ಸುದ್ದಿ

ವಾಹನ ಸವಾರರೇ ಗಮನಿಸಿ: ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?

(new rules: ) ರಸ್ತೆ ಅಪಘಾತಗಳನ್ನು ತಡೆಗಟ್ಟಲು ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ ಹೈ ಬೀಮ್ ಲೈಟ್, ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ವಿಶೇಷ ಕಾರ್ಯಚರಣೆ ನಡೆಸಲಾಗಿದೆ.

ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದೇ ರೀತಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಪುಟ್ ಪಾತ್ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಾಚರಣೆ ಮಾಡುವುದು, ಇದರ ಜೊತೆಗೆ Defective Number Plate ಮೇಲೆ ಸಹ 01 ನೇ ಆಗಸ್ಟ್ 2024 ರಿಂದ ವಿಶೇಷ ಕಾರ್ಯಾಚರಣೆ ನಡೆಸಲು ಎಲ್ಲಾ ಘಟಕಗಳಲ್ಲಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನ ಮಾಡುವುದು ಜೀವನಕ್ಕೆ ಅಪಾಯಕಾರಿಯಾಗಿದ್ದು, ಇಂತಹ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ಮೇಲೆ ಬಿಎನ್‌ಎಸ್ 281 ಅಡಿಯಲ್ಲಿ ಮತ್ತು 184 IMV ಕಾಯ್ದೆಯಡಿ ಹಾಗೂ FIR ದಾಖಲು ಮಾಡಿ ಕ್ರಮ ಜರುಗಿಸಲಾಗುತ್ತದೆ.

Related Articles

Leave a Reply

Your email address will not be published. Required fields are marked *

Back to top button