ಪ್ರಮುಖ ಸುದ್ದಿ
ಅಪರಿಚಿತ ಶವ ಪತ್ತೆ ಕೊಲೆ ಶಂಕೆ
ಯಾದಗಿರಿಃ ಅಪರಿಚಿತ ಯುವಕನೋರ್ವನ ಶವ ನಗರದ ಹತ್ತಿಕುಣಿ ಕ್ರಾಸ್ ಬಳಿ ಪತ್ತೆಯಾಗಿದ್ದು, ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಅಂದಾಜು 24 ವರ್ಷದ ಯುವಕನ ದೇಹ ಇದಾಗಿದ್ದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಮೃತ ದೇಹದ ಮುಖದ ಮೇಲೆ ಕಲ್ಲು ಎತ್ತಿ ಹಾಕಿರುವ ಗುರುತು ಕಾಣುತ್ತಿದೆ. ಶವದ ಸ್ಥಿತಿ ನೋಡಿದರೆ ಹಾಗೇ ಅನಿಸುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.




