ಪ್ರಮುಖ ಸುದ್ದಿ
ಕಾಂಗ್ರೆಸ್ ಅಬ್ಯರ್ಥಿ ಸೌಮ್ಯರೆಡ್ಡಿಗೆ ಒಲಿದ ಜಯನಗರದ ವಿಜಯಮಾಲೆ!
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಜಯನಗರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಬ್ಯರ್ಥಿ ಸೌಮ್ಯರೆಡ್ಡಿ ಗೆಲುವು ಸಾಧಿಸಿದ್ದಾರೆ. ಮೊದಲ ಸುತ್ತಿನಿಂದಲೂ ಮುನ್ನಡೆ ಸಾಧಿಸುತ್ತ ಸಾಗಿದ ಕಾಂಗ್ರೆಸ್ ಅಬ್ಯರ್ಥಿ 4.000 ಕ್ಕೂ ಅಧಿಕ ಮತಗಳಿಂದ ಬಿಜೆಪಿ ಅಭ್ಯರ್ಥಿ ಬಿ.ಎನ್.ಪ್ರಹ್ಲಾದ್ ಅವರನ್ನು ಮಣಿಸಿದ್ದಾರೆ.
ವಿಜಯಕುಮಾರ್ ಸಾವಿನ ಹಿನ್ನೆಲೆಯಲ್ಲಿ ಜಯನಗರ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿತ್ತು. ಹೀಗಾಗಿ, ಕಳೆದ ಸೋಮವಾರ ನಡೆದ ಮತದಾನದಲ್ಲಿ ಶೇಕಡಾ 55ರಷ್ಟು ಮತದಾನ ನಡೆದಿತ್ತು. ಒಟ್ಟು 2 ಲಕ್ಷ ಮತದಾರರಲ್ಲಿ 1,11,689 ಜನ ಹಕ್ಕು ಚಲಾಯಿಸಿದ್ದರು.