ಪ್ರಮುಖ ಸುದ್ದಿ
ಬಿಜೆಪಿಗೆ ಜೆಡಿಎಸ್ ಬಾಹ್ಯಬೆಂಬಲ ವಿಚಾರ – ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್
ಬೆಂಗಳೂರು : ಜೆಡಿಎಸ್ ಪಕ್ಷದ ಸಭೆಯಲ್ಲಿ ಕೆಲ ಶಾಸಕರು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡುವ ನಿರ್ಧಾರ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈ ಕೆಳಗಿನಂತೆ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ. ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ. – ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್