Homeಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಪತ್ರಿಕೋದ್ಯಮದಲ್ಲಿ ಸುವರ್ಣವಕಾಶ : ಪತ್ರಿಕಾ ತರಬೇತಿಯೊಂದಿಗೆ 20,000 ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

(Training-:) ಪತ್ರಿಕೋದ್ಯಮ ವಿಷಯದಲ್ಲಿ ಆಸಕ್ತ ಇರುವ ಮಹಿಳಾ ವಿದ್ಯಾರ್ಥಿಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮಹಿಳಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ 2 ತಿಂಗಳ ಕಾಲ ತರಬೇತಿ ಜೊತೆಗೆ ಮಾಸಿಕ ತಲಾ 20,000 ರೂ. ಶಿಶ್ಯವೇತನ ನೀಡಲಾಗುತ್ತದೆ.
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
- ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳು ಅರ್ಹರು.
- 28 ವರ್ಷದೊಳಗಿನ ಮಹಿಳಾ ವಿದ್ಯಾರ್ಥಿಗಳು ಅರ್ಹರು.
- ಅರ್ಜಿ ಸಲ್ಲಿಕೆ ಹೇಗೆ?;
ಮಹಿಳಾ ವಿದ್ಯಾರ್ಥಿಗಳು ಆಗಸ್ಟ್ 26 ರೊಳಗೆ ತಮ್ಮ ವಿವರದೊಂದಿಗೆ ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಇಮೇಲ್ ಗೆ ಕಳುಹಿಸುವುದು. - ಸೂಚನೆ: ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದ್ದು, ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುತ್ತದೆ ಎಂದು ಅಕಾಡೆಮಿಯ ಪ್ರಕಟಣೆಯಲ್ಲಿ ತಿಳಿಸಿದೆ.