ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; 30,000 ವರೆಗೆ ಸಂಬಳ

(CANARA:) ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ:
* ಅಕೌಂಟ್ಸ್
* ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ, sc/st ಅಭ್ಯರ್ಥಿಗಳಿಗೆ 25 ವರ್ಷ, ಇತರೆ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.
ವಿದ್ಯಾರ್ಹತೆ:
ಬಿ.ಕಾಂ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನದ ಅಗತ್ಯವಿದೆ.
ಅರ್ಜಿ ಸಲ್ಲಿಕೆ ಹೇಗೆ?:
* ಕೆನರಾ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.(https://canarabank.com/pages/Recruitment)
* ನೇಮಕಾತಿ ವಿಭಾಗದ ಅಡಿಯಲ್ಲಿ ಅಪ್ಲಿಕೇಶನ್ ಡೌನ್ ಲೋಡ್ ಮಾಡಿ
* ಸರಿಯಾದ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿ
* ನಿಮ್ಮ ಫೋಟೋ ಮತ್ತು ಸಹಿ ಸೇರಿದಂತೆ ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಅನುಭವದ ಪುರಾವೆಗಳಂತಹ ಎಲ್ಲಾ ಆಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.
ಕ್ಯಾನ್ ಬ್ಯಾಂಕ್ ವೆಂಚರ್ ಕ್ಯಾಪಿಟಲ್ ಫಂಡ್ ಲಿಮಿಟೆಡ್ (CVCFL) ಬೆಂಗಳೂರು -560004
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 300 ರೂ.
ಇತರೆ ಅಭ್ಯರ್ಥಿಗಳಿಗೆ 500 ರೂ.
ಆಯ್ಕೆ ಪ್ರಕ್ರಿಯೆ ಹೇಗೆ?;
ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳು ಆಯ್ಕೆ ಮಾಡಿ ಮುಖಾಮುಖಿ ಸಂದರ್ಶನದ ಬಳಿಕ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು 12 ತಿಂಗಳ ಪ್ರೊಬೇಷನರಿ ಅವಧಿಯನ್ನು ಪೂರ್ಣಗೊಳಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜೂ.30 2024