ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿಕೆಗೆ ಖರ್ಗೆ ಆಕ್ರೋಶ
ಯಾದಗಿರಿಃ ಹೈದ್ರಾಬಾದ ಕರ್ನಾಟಕ ಅಭಿವೃದ್ಧಿ ಮಾಡದ ನಾಯಕರು ನಾಲಾಯಕರು ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ನೀಡಿರುವ ಹೇಳಿಕೆ ಬಗ್ಗೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಂತಕುಮಾರ ಹೆಗಡೆ ಸಾಂವಿಧಾನಿಕ ಹುದ್ದೆ ಹೊಂದಿದ್ದ ಹುದ್ದೆಯ ಘನತೆಗೆ ತಕ್ಕ ಮಾತನಾಡಬೇಕು. ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಪ್ರತಿಯೊಂದಕ್ಕೂ ತಮ್ಮ ವಿರೋಧ ಪಕ್ಷದ ವಿರುದ್ಧ ಕೆಟ್ಟ ಮಾತನಾಡುವುದು ಸರಿಯಲ್ಲ. ಇದು ಅವರ ಸಂಸ್ಕೃತಿ ತೋರಿಸುತ್ತದೆ.
ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಆಲಮಟ್ಟಿ ಡ್ಯಾಂ, ರಾಷ್ಟ್ರೀಯ ಹೆದ್ದಾರಿಯಂತಹ ಹತ್ತು ಹಲವು ಯೋಜನೆಗಳ ಮೂಲಕ ಸಾಕಷ್ಟು ಕೆಲಸಗಳನ್ನು ಮಾಡಲಾಗಿದೆ. ಸಂದರ್ಭ ಬಂದಾಗ ಉತ್ತರಿಸುವೆ ಎಂದು ಪ್ರತಿಕ್ರಿಯೆಸಿದರು.
ಅಲ್ಲದೆ ದೇಶದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚುತ್ತಿದೆ. ಇದರಿಂದ ಸಾರ್ವಜನಿಕರಿಗೆ ಹೊರೆಯಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ ಕಾರ್ಪೋರೇಟರ್ ಸಂಸ್ಥೆಗಳಿಗೆ ಮಣೆ ಹಾಕುತ್ತಿದೆ. ಕೇಂದ್ರ ಸರ್ಕಾರ 66 ಸಾವಿರ ಕೋಟಿ ಬ್ಯಾಂಕ್‍ಗೆ ನೀಡಿರುವುದೇ ನಿದರ್ಶನ. ಮತ್ತು ಡಾ.ಬಿ.ಆರ್.ಅಂಬೇಡ್ಕರ ಅವರು ಬರೆದ ಸಂವಿಧಾನವನ್ನೇ ಬದಲಾಯಿಸುತ್ತೇನೆ ಎಂಬ ಹೇಳಿಕೆ ನೀಡುವ ಇಂತವರಿಗೆ ಜನರೇ ಪಾಠ ಕಲಿಸಲಿದ್ದಾರೆ ಎಂದರು.