ಪ್ರಮುಖ ಸುದ್ದಿ
ಟ್ರ್ಯಾಕ್ಟರ್ ಪಲ್ಟಿ : ಇಬ್ಬರು ದುರ್ಮರಣ
ಕಲಬುರಗಿ : ತಾಲೂಕಿನ ಖಣದಾಳ್ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಜೇವರ್ಗಿ ತಾಲೂಕಿನ ಕೋಳಕೂರು ಗ್ರಾಮದ ದತ್ತು (38), ಕಮಲಾಪುರ ತಾಲೂಕಿನ ಹಿಪ್ಪರಗಿ ಗ್ರಾಮದ ಶರಣಪ್ಪ(38) ಎಂದು ಗುರುತಿಸಲಾಗಿದೆ. ಕಲಬುರಗಿ ಹೆಚ್ಚುವರಿ ಸಂಚಾರಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.