ಪ್ರಮುಖ ಸುದ್ದಿ
”ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಅಮ್ಮಾವ್ರ ಗಂಡ ಆಗಿದ್ದಾರೆ!”
ಶಿವಮೊಗ್ಗ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈಗ ಅಮ್ಮಾವ್ರ ಗಂಡ ಆಗಿದ್ದಾರೆ. ಕಾಂಗ್ರೆಸ್ ನಾಯಕರು ಹೇಳಿದಂತೆ ಸಿಎಂ ಕುಮಾರಸ್ವಾಮಿ ಕೇಳುತ್ತಿದ್ದಾರೆ. ಹೀಗಾಗಿ, ಸಮ್ಮಿಶ್ರ ಸರ್ಕಾರ ಈವರೆಗೆ ಒಂದು ಹೆಜ್ಜೆ ಸಹ ಮುಂದೆ ಹೋಗಿಲ್. ಆರು ತಿಂಗಳಲ್ಲಿ ಸಮ್ಮಿಶ್ರ ಸರ್ಕಾರ ಪತನ ಆಗಲಿದೆ ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಕಿಡಿ ಕಾರಿದರು. ಸಮುದಾಯದ ಸ್ವಾಮೀಜಿಗಳನ್ನು ಮುಂದಿಟ್ಟುಕೊಂಡು ಇಬ್ಬರೂ ರಾಜಕಾರಣ ಮಾಡುತ್ತಿದ್ದಾರೆ. ಅಧಿಕಾರಕ್ಕಾಗಿ ಇವರು ಏನುಬೇಕಾದರೂ ಮಾಡುತ್ತಾರೆ ಎಂಬುದನ್ನು ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.