ಪ್ರಮುಖ ಸುದ್ದಿ
ಜೇವರಗಿ ಬಳಿ ಭೀಕರ ಅಪಘಾತ : ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ
ಕಲಬುರಗಿ: ಜೇವರಗಿ ಪಟ್ಟಣದ ಕ್ರೀಡಾಂಗಣ ಸಮೀಪ ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಬಸ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ಬಸ್ ಚಾಲಕ ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ. ಬಸ್ ನ ಅಡಿಯಲ್ಲಿ ಇನ್ನು ಕೆಲವರು ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.
ಭೀಕರ ಅಪಘಾತದಲ್ಲಿ ಹತ್ತುಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ಜೇವರಗಿ ತಾಲ್ಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೇವರಗಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆಯಿಂದಷ್ಟೇ ಅಪಘಾತಕ್ಕೆ ನಿಖರ ಕಾರಣ ತಿಳಿದು ಬರಬೇಕಿದೆ.