ಪ್ರಮುಖ ಸುದ್ದಿ
ಶೀಘ್ರದಲ್ಲಿ ಕರ್ನಾಟಕ ಬಂದ್ ಗೆ ಕರೆ – ವಾಟಾಳ್ ನಾಗರಾಜ
ಶೀಘ್ರದಲ್ಲಿ ಕರ್ನಾಟಕ ಬಂದ್ ಗೆ ಕರೆ – ವಾಟಾಳ್
ಬೆಳಗಾವಿಃ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕರೆಯಬೇಕು, ಕೇಂದ್ರ ಸರ್ಕಾರ ನೆರೆ ಪರಿಹಾರ ಹಣ ಬಿಡುಗಡೆಗೊಳಿಸಬೇಕು ಇಲ್ಲವಾದಲ್ಲಿ ಶೀಘ್ರದಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗುವದು ಎಂದು ವಾಟಾಳ್ ಪಕ್ಷದ ವಾಟಾಳ್ ನಾಗರಾಜ ರಾಜ್ಯ, ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸಬೇಕು ಎಂದು ಆಗ್ರಹಿಸಿ ನಗರದ ಚನ್ನಮ್ಮ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ರಸ್ತೆ ಮೇಲೆ ಮಲಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು,
ಕೇಂದ್ರ ಸರ್ಕಾರ ಕೂಡಲೇ ನೆರೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಪರಿಹಾರ ಹಣ ಬಿಡುಗಡೆ ಮಾಡದಿದ್ದಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಾದೀತು ಎಂದು ಮತ್ತೊಮ್ಮೆ ಎಚ್ಷರಿಸಿದರು.