Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ

ಈ ಜಿಲ್ಲೆಯವರಿಗೆ ಮೊದಲ ಹಂತದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

ಕಳೆದ ಎರಡು ತಿಂಗಳಿಂದ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಿರದ ಗೃಹಲಕ್ಷ್ಮಿ ಯೋಜನೆಯ ರೂ 2,000 ಹಣ(Gruhalakshmi amount release) ಫಲಾನುಭವಿಗಳ ಖಾತೆಗೆ ಹಂತ ಹಂತವಾಗಿ ಜಮಾ ಮಾಡಲಾಗುತ್ತಿದೆ.

ವರಮಹಾಲಕ್ಷ್ಮೀ ಹಬ್ಬಕ್ಕೆ ರಾಜ್ಯದ ಮಹಿಳೆಯರಿಗೆ ‘ಗೃಹಲಕ್ಷ್ಮಿ ಯೋಜನೆ’ಯ ಎರಡು ತಿಂಗಳ ಬಾಕಿ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ  ಎಂದು  ಲಕ್ಷ್ಮೀ ಹೆಬ್ಬಾಳರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಸ್ಪಷ್ಟನೆ ನೀಡಲಾಗಿತ್ತು ಇದರಂತೆ ಈಗ ಮೊದಲ ಹಂತದಲ್ಲಿ ಹಣ ವರ್ಗಾವಣೆ ಮಾಡಲಾಗಿರುತ್ತದೆ.

ರಾಜ್ಯದ ಎಲ್ಲಾ ಜಿಲ್ಲೆಯ ಅರ್ಹ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಜಮಾ ಮಾಡಲಾಗುತ್ತಿದ್ದು ಪ್ರಸ್ತುತ ಮೊದಲ ಹಂತದಲ್ಲಿ ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ, ಬಳ್ಳಾರಿ, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ 533 ಕೋಟಿ ರೂ. ಪಾವತಿ ಮಾಡಲಾಗಿರುತ್ತದೆ.

ಉಳಿದ ಜಿಲ್ಲೆಯ ಫಲಾನುಭವಿಗಳಿಗೆ ಎರಡನೇ ಹಂತ ಅಂದರೆ ಇನ್ನೊಂದರೆಡು ದಿನಗಳ ಒಳಗಾಗಿ ಎಲ್ಲಾ ಜಿಲ್ಲೆಯ ಅರ್ಜಿದಾರರಿಗೆ ಈ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿದ್ದ ರೂ 2,000 ಅರ್ಥಿಕ ನೆರವು ಜಮಾ ಅಗಲಿದೆ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಮಂಗಳವಾರ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ‘ತಾಂತ್ರಿಕ ಕಾರಣಗಳಿಂದ ಎರಡು-ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿದ ರೂ 2,000 ಹಣ ಫಲಾನುಭವಿಗಳ ಖಾತೆಗೆ ಅಂದರೆ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಜಮೆ ಆಗಿರಲಿಲ್ಲ. 6 ಆಗಸ್ಟ್ 2024 ರಿಂದಲೇ ಜೂನ್, ಜುಲೈ ತಿಂಗಳ ಗೃಹಲಕ್ಷ್ಮೀ ಹಣ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ ಹಣ ವರ್ಗಾವಣೆಯು 26.65 ಲಕ್ಷ ರೂ. ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಅಗಲಿದ್ದು ಮೊದಲ ಹಂತದಲ್ಲಿ ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ, ಬಳ್ಳಾರಿ, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ 533 ಕೋಟಿ ರೂ. ಹಣ ವರ್ಗಾವಣೆ ಅಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಲೋಕಸಭಾ ಚುನಾವಣಾ ಇದ್ದ ಕಾರಣ ಇದರ ಪ್ರಯುಕ್ತ ನೀತಿ ಸಂಹಿತೆ ಜಾರಿ ಇದ್ದ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಫಲಾನುಭವಿಗಳಿಗೆ ವರ್ಗಾವಣೆ ಮಾಡಲು ತಡಲಾಗಿತ್ತು ಈಗ ಹಣಕಾಸು ಇಲಾಖೆ ಸಮ್ಮತಿಸಿದ್ದು, ಶೀಘ್ರದಲ್ಲೇ ಹಣ ಬಿಡುಗಡೆಯಾಗಲಿದೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಲಕ್ಷ್ಮೀ ಹೆಬ್ಬಾಳರ್ ಕಾರ್ಯಕ್ರಮದಲ್ಲಿ ತಿಳಿಸಿದರು.

 

Related Articles

Leave a Reply

Your email address will not be published. Required fields are marked *

Back to top button